ನಾಯಕನಹಟ್ಟಿ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಗೆ ಅತ್ಯುತ್ತಮ ಆಡಳಿತ ನೀಡಿದ್ದಾರೆ ಎಂದು ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ.ಆರ್.ರವಿಕುಮಾರ್ ಹೇಳಿದರು.
ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಎಲ್ಲಾ ಜನರು ಸಂತೋಷದಿಂದ ಜೀವನ ನಡೆಸುತ್ತಿದ್ದಾರೆ, ಪಂಚ ಗ್ಯಾರೆಂಟಿಗಳಿದ ಹೆಣ್ಣುಮಕ್ಕಳು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರು ದಲಿತರ ಮಹಿಳೆಯರ ಪರ ಕೆಲಸ ಮಾಡಲಿದೆ, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನಭಾಗ್ಯ ಜಾರಿಗೆ ತಂದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳಿಂದ ಪ್ರತಿಯೊಂದ ಕುಟುಂಬಕ್ಕೆ ಅನುಕೂಲವಾಗಿದೆ. ಗೃಹಜ್ಯೋತಿ-ಎಲ್ಲಾ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ, ಗೃಹಲಕ್ಷಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿಗಳು, ಅನ್ನಭಾಗ್ಯ-ಬಿ.ಪಿ.ಎಲ್. ಕುಟುಂಬಗಳಿಗೆ 10 ಕೆ.ಜಿ. ಆಹಾರ ಧಾನ್ಯ, ಯುವನಿಧಿ-ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ ಪದವಿದಾರರಿಗೆ – ತಿಂಗಳಿಗೆ 3000, ಡಿಪ್ಲೊಮ ಮಾಡಿದವರಿಗೆ ತಿಂಗಳಿಗೆ 1500, ಕೆ.ಎಸ್.ಆರ್.ಟಿ.ಸಿ.ಯ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೇವೆ ಒದಗಿಸಿದ್ದಾರೆ ಎಂದರು. ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡುವ ಅವರ ಕುಂದು ಕೊರತೆಗಳಿಗೆ ಸ್ಪಂಧಿಸುವುದು ಕಾಂಗ್ರೆಸ್ ಪಕ್ಷ, ರಾಜ್ಯ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 4 ರಿಂದ 5 ಸಾವಿರ ರೂಪಾಯಿ ಹಣ ಉಳಿತಾಯವಾಗುತ್ತದೆ. ಆ ಹಣವನ್ನು ನಿಮ್ಮ ಮಕ್ಕಳಿಗೆ ಶಿಕ್ಷಣ ಭವಿಷ್ಯ ರೂಪಿಸಲು ಬಳಸಿಕೊಳ್ಳಬೇಕು ಎಂದರು. ಏಕೆಂದರೆ ಜಗತ್ತಿನಲ್ಲಿ ಕಳುವು ಆಗದಿರುವ ವಸ್ತು ಎಂದರೆ ಅದು ಶಿಕ್ಷಣ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಕುಳಿತು ಏನು ಬೇಕಾದರೂ ಮಾಡಬಹುದು ಆದರೆ ಶಿಕ್ಷಣವನ್ನು ಯಾರಿಂದಲೂ ಕಳ್ಳತನ ಮಾಡಲು ಸಾಧ್ಯವಿಲ್ಲ, ಬಸವಣ್ಣನವರ ಸಮಾನತೆ, ಅಂಬೇಡ್ಕರ್ ಸಂವಿಧಾನ ಗೌರವಿಸುವ ಶಿಕ್ಷಣ ನೀಡಿದರು ಆದ್ದರಿಂದ ಮಹಿಳೆಯರು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿ ಎಂದು ಮನವಿ ಮಾಡಿಕೊಂಡರು.








