ರಾಜ್ಯಾದ್ಯಂತ ಬರ ಅಧ್ಯಯನ ಆರಂಭ : ಗದಗದಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ಮೈಸೂರಿನಲ್ಲಿ ಡಿಸಿಎಂ ಪರಮೇಶ್ವರ್ ಪ್ರವಾಸ

ಗದಗ / ಮೈಸೂರು : ರಾಜ್ಯದಲ್ಲಿ ಮಳೆಯ ಕೊರತೆಯಿಂದ ತೀವ್ರಗೊಂಡಿರುವ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯನ್ನು ಖುದ್ದಾಗಿ ಅರಿಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರದಿAದ ರಾಜ್ಯಾದ್ಯಂತ ಬರ ಪರಿಶೀಲನಾ ಪ್ರವಾಸ ಆರಂಭಿಸಿದ್ದಾರೆ. ಸಿಎಂ ಗದಗ ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ಹಾನಿ ವೀಕ್ಷಿಸಿದರೆ, ಡಿಸಿಎಂ ಮೈಸೂರು ಜಿಲ್ಲೆಯಲ್ಲಿ ರೈತರ ಅಹವಾಲು ಆಲಿಸುವ ಮೂಲಕ ಸಾಂತ್ವನ ಹೇಳಿದರು.

ರೈತರ ಜಮೀನಿನಲ್ಲಿ ಸಿಎಂ ರೌಂಡ್ಸ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಾಂಪೂರ ಹಾಗೂ ಗದಗ ತಾಲೂಕಿನ ಕುರ್ತಕೋಟಿ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿದರು. ಮಳೆಯಿಲ್ಲದೆ ಒಣಗುತ್ತಿದ್ದ ಸೂರ್ಯಕಾಂತಿ, ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಗಳನ್ನು ವೀಕ್ಷಿಸಿ ರೈತರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದರು. ಈ ವೇಳೆ ಸಿಎಂಗೆ ಮನವಿ ಸಲ್ಲಿಸಿದ ರೈತರು, “ಗದಗವನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಎಕರೆಗೆ ೫೦ ಸಾವಿರ ರೂ. ಬೆಳೆ ಪರಿಹಾರ ನೀಡಬೇಕು. ಬ್ಯಾಂಕ್ ಸಾಲ ಮನ್ನಾ ಮಾಡುವುದರ ಜೊತೆಗೆ ಜಾನುವಾರುಗಳಿಗೆ ಗೋಶಾಲೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, “ವಾಸ್ತವ ಸ್ಥಿತಿಯನ್ನು ಅರಿಯಲೆಂದೇ ಬಂದಿದ್ದೇವೆ. ಮತ್ತಷ್ಟು ಪ್ರದೇಶಗಳ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರದ ಮಾರ್ಗಸೂಚಿಯನ್ವಯ ಬರ ತಾಲೂಕುಗಳ ಘೋಷಣೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಬರ ಘೋಷಣೆ, ಪರಿಹಾರಕ್ಕೆ ರೈತರ ಆಗ್ರಹ: ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ರೈತರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಬರದಿಂದಾಗಿ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಪ್ರತಿ ಎಕರೆಗೆ ೫೦ ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಜಾನುವಾರುಗಳಿಗೆ ಅಗತ್ಯವಿರುವ ಮೇವು ಲಭ್ಯವಾಗುವಂತೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ರಾಷ್ಟಿçÃಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು. ಬರದಿಂದ ಕೃಷಿ ಚಟುವಟಿಕೆಗಳು ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಲ್ಲಿ ರೈತರು ಮನವಿ ಮಾಡಿದರು.

ಮುಖ್ಯಮಂತ್ರಿಗಳೊAದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಹೆಚ್.ಕೆ. ಪಾಟೀಲ ಸೇರಿದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಶಾಸಕ ಬಿ.ಆರ್. ಯಾವಗಲ್, ರಾಮಣ್ಣ ಲಮಾಣಿ ಮತ್ತಿತರರು ಇದ್ದರು

 

ಅಧಿಕಾರಿಗಳ ವಿರುದ್ಧ ಸಿಎಂ ಗರಂ:
ಕುರ್ತಕೋಟಿಯಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರಿಂದ ತೀವ್ರ ನೂಕುನುಗ್ಗಲು ಉಂಟಾಯಿತು. ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿಗಳು, ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. “ನಾನು ಬೆಳೆ ಹಾನಿ ನೋಡಲು ಬಂದಿದ್ದೇನೆ. ಜನರನ್ನು ಕಂಟ್ರೋಲ್ ಮಾಡಲು ನಿಮ್ಮಿಂದ ಆಗಲ್ವಾ? ನಾಲ್ಕು ಜನ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದಾಗ ನಿಮಗೆ ಬುದ್ಧಿ ಬರುತ್ತೆ,” ಎಂದು ಐಜಿಪಿ, ಎಸ್ಪಿ ಹಾಗೂ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Recent Articles

spot_img

Related Stories

Share via
Copy link