ಬೆಂಗಳೂರು
ಬಳ್ಳಾರಿ ಗಣಿಧಣಿ ಎಂದೇ ಖ್ಯಾತಿ ಪಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಬಾರಿಯ ಚುನಾವಣೆಗೆ ಪಕ್ಷದ ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಗುರುವಾರ ಕೊಪ್ಪಳದಲ್ಲಿ ಜನಾರ್ದನ ರೆಡ್ಡಿ ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.