ಓಟಿಟಿಗೆ ಬರಲಿದೆ ಗೇಮ್‌ ಚೇಂಜರ್‌ ಯಾವಾಗ ಗೊತ್ತಾ….?

ತೆಲಂಗಾಣ :

    ಶಂಕರ್​ ನಿರ್ದೇಶನದ ‘ಗೇಮ್ ಚೇಂಜರ್’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಚಿತ್ರಮಂದಿರದಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸೋತ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ. ಒಟಿಟಿಯಲ್ಲಾದರೂ ಜನರು ಈ ಸಿನಿಮಾವನ್ನು ನೋಡಿ ಮೆಚ್ಚಿಕೊಳ್ಳಬಹುದು ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಗೇಮ್ ಚೇಂಜರ್’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ರಾಮ್ ಚರಣ್​, ಕಿಯಾರಾ ಅಡ್ವಾಣಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

     ಜನವರಿ 10ರಂದು ಚಿತ್ರಮಂದಿರದಲ್ಲಿ ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಿತ್ತು. ಅದ್ದೂರಿ ಬಜೆಟ್​ನಲ್ಲಿ ದಿಲ್ ರಾಜು ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆದರೆ ಹಾಕಿದ ಬಂಡವಾಳ ವಾಪಸ್ ಬಂದಿಲ್ಲ. ಸ್ಟಾರ್ ಸಿನಿಮಾ ಆದ್ದರಿಂದ ಒಟಿಟಿಯಲ್ಲಿ ಈ ಚಿತ್ರಕ್ಕೆ ಬೇಡಿಕೆ ಇದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರದ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ ಖರೀದಿ ಮಾಡಿತ್ತು. ರಾಜಕೀಯದ ಕಥಾಹಂದರ ಈ ಸಿನಿಮಾದಲ್ಲಿದೆ.

    ಚಿತ್ರಮಂದಿರದಲ್ಲಿ ರಿಲೀಸ್​ ಆಗಿ ಒಂದು ತಿಂಗಳು ಕಳೆಯುವುದರೊಳಗೆ ‘ಗೇಮ್ ಚೇಂಜರ್’ ಸಿನಿಮಾ ಒಟಿಟಿಗೆ ಬರುವಂತಾಗಿದೆ. ಫೆಬ್ರವರಿ 7ರಿಂದ ಈ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಒಟಿಟಿ ಪ್ರೇಕ್ಷಕರು ಈ ಚಿತ್ರಕ್ಕೆ ಯಾವ ರೀತಿಯ ವಿಮರ್ಶೆ ನೀಡುತ್ತಾರೆ ಎಂಬುದನ್ನು ತಿಳಿಯಬೇಕಿದೆ. ತೆಲುಗಿನ ಈ ಸಿನಿಮಾ ಕನ್ನಡ, ತಮಿಳು ಮುಂತಾದ ಭಾಷೆಗಳಿಗೆ ಡಬ್ ಆಗಿದೆ. ಈ ಸಿನಿಮಾ ಹಿಂದಿ ಭಾಷೆಗೂ ಡಬ್ ಆಗಿದೆ. ಆದರೆ ಹಿಂದಿ ವರ್ಷನ್ ಒಟಿಟಿ ರಿಲೀಸ್ ಬಗ್ಗೆ ಇನ್ನೂ ಮಾಹಿತಿ ಬಹಿರಂಗ ಆಗಿಲ್ಲ. 

    ‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ಅವರು ಜಿಲ್ಲಾಧಿಕಾರಿ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಅವರು ನಟಿಸಿದ್ದಾರೆ. ಎಸ್​.ಜೆ. ಸೂರ್ಯ, ಸುನಿಲ್, ಜಯರಾಮ್, ಶ್ರೀಕಾಂತ್, ಅಂಜಲಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಹಾಡುಗಳನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಚಿತ್ರದ ಬಾಕ್ಸ್ ಆಫೀಸ್​ ಲೆಕ್ಕದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನಿರ್ಮಾಪಕರನ್ನು ಟ್ರೋಲ್ ಮಾಡಲಾಗಿತ್ತು. ಆ ಬಗ್ಗೆ ರಾಮ್ ಗೋಪಾಲ್ ವರ್ಮಾ ಕೂಡ ಟೀಕೆ ಮಾಡಿದ್ದರು.

Recent Articles

spot_img

Related Stories

Share via
Copy link