‘ಗೇಮ್ ಚೇಂಜರ್’ ಚಿತ್ರಕ್ಕೆ ಸಂಕಷ್ಟ ತರುತ್ತಾ ಪುಷ್ಪಾ-2 ಚಿತ್ರದ ಇಮೇಜ್‌ ….!

ತೆಲಂಗಾಣ : 

    ರಾಮ್ ಚರಣ್ ನಟನೆಯ ಗೇಮ್ ಚೇಂಜರ್ ಸಿನಿಮಾ ಜನವರಿ 10ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಚಿತ್ರಕ್ಕೆ ಈಗ ದೊಡ್ಡ ಹಿನ್ನಡೆ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಪುಷ್ಪ 2’ ಪ್ರೀಮಿಯರ್ ದಿನ ನಡೆದ ಘಟನೆ. ಈ ಚಿತ್ರದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತದ ಬಳಿಕ ತೆಲಂಗಾಣ ಸರ್ಕಾರ ಎಚ್ಚೆತುಕೊಂಡಿದ್ದು, ವಿಶೇಷ ಶೋ ಕೊಡಲು ನಿರಾಕರಿಸಿದೆ.

    ಜನವರಿ 10ರ ಮುಂಜಾನೆ 1 ಗಂಟೆಗೆ ಬೆನಿಫಿಟ್ ಶೋ ಆಯೋಜನೆಗೆ ಮನವಿ ಮಾಡಲಾಗಿತ್ತು. ಆದರೆ, ಇದಕ್ಕೆ ಸರ್ಕಾರ ನಿರಾಕರಿಸಿದೆ. ಆದರೆ, ಹೈದರಾಬಾದ್​ನಲ್ಲಿ ಬೆಳಿಗ್ಗೆ 4 ಗಂಟೆಗೆ ಆರು ಕಡೆಗಳಲ್ಲಿ ಮಾತ್ರ ವಿಶೇಷ ಶೋ ಪ್ರದರ್ಶನ ಮಾಡಲು ಅನುಮತಿ ನೀಡಿದೆ. ಮಲ್ಟಿಪ್ಲೆಕ್ಸ್​ನಲ್ಲಿ 150 ರೂಪಾಯಿ ಹಾಗೂ ಸಿಂಗ್​ಸ್ಕ್ರೀನ್ ಥಿಯೇಟರ್​ಗಳಲ್ಲಿ 100 ರೂಪಾಯಿ ಏರಿಕೆಗೆ ಅವಕಾಶ ನೀಡಿದೆ. ಇದು ಮೊದಲ ದಿನ ಮಾತ್ರ. ಜನವರಿ 11ರಿಂದ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಹಾಗೂ ಥಿಯೇಟರ್​ಗಳಲ್ಲಿ 50 ರೂಪಾಯಿ ಏರಿಕೆಗೆ ಅವಕಾಶ ನೀಡಲಾಗಿದೆ.

 

    ದಿಲ್ ರಾಜು ಅವರು ‘ಗೇಮ್ ಚೇಂಜರ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಿಗ್ ಬಜೆಟ್ ಎಂಬ ಕಾರಣಕ್ಕೆ ಸಿನಿಮಾಗೆ ದೊಡ್ಡ ಮಟ್ಟದ ಗಳಿಕೆ ಮಾಡಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ನಿರ್ಮಾಣ ಸಂಸ್ಥೆ ನಾನಾ ರೀತಿಯ ಸರ್ಕಸ್ ಮಾಡುತ್ತಿದೆ.

Recent Articles

spot_img

Related Stories

Share via
Copy link