ಬೆಳಗಾವಿ
ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.
ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.
ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.