ಲುಧಿಯಾನ :ಗುಂಪುಗಳ ನಡುವೆ ಘರ್ಷಣೆ..!

ಅಮೃತಸರ

     ಗಡಿ ರಾಜ್ಯವಾಗಿರುವ ಪಂಜಾಬ್‌ನ ಲುಧಿಯಾನ ನ್ಯಾಯಾಲಯ ಸಂಕೀರ್ಣದ ಬಳಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಾಗಿ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. 

     ಹಳೆ ವೈಷಮ್ಯ ಘರ್ಷಣೆಗೆ ಕಾರಣ ಎಂದು ಶಂಕಿಸಲಾಗಿದ್ದು. ಹಿಮಾಂಶು ಮತ್ತು ಜಸ್ಪ್ರೀತ್ ಸಿಂಗ್ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದಾಗ ಮತ್ತೊಂದೆಡೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದು ಘರ್ಷಣೆಗೆ ಕಾರಣವಾಯಿತು. ಘರ್ಷಣೆ ವೇಳೆ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ಗಾಯಗೊಂಡ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರಾಜೇಶ್ ಶರ್ಮಾ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link