ಮಧ್ಯಪ್ರದೇಶ : ಪತಿಯ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್,

ರೇವಾ: 

    ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಆರೋಪಿಗಳು ವಿಹಾರಕ್ಕೆ ತೆರಳಿದ್ದ ದಂಪತಿಯನ್ನು ಸುತ್ತುವರೆದು, ಪತಿಯ ಎದುರೇ ಪತ್ನಿ ಮೇಲೆ ಸಾಮೂಹಿತ ಅತ್ಯಾಚಾರ ನಡೆಸಿದ್ದಾರೆ.

    ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವದಂಪತಿ ಭೈರವನಾಥ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಐವರು ಆರೋಪಿಗಳು ಅಲ್ಲಿಗೆ ಬಂದು ಪತಿಗೆ ಥಳಿಸಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಬೆಳಕಿಗೆ ಬಂದ ನಂತರ ರಾಜ್ಯ ರಾಜಕಾರಣದಲ್ಲಿ ಬಿಸಿ ತಟ್ಟಿದೆ. ಇನ್ನು ದೂರಿನ ನಂತರ ಪೊಲೀಸರು ವಿಷಯವನ್ನು ಮುಚ್ಚಿಟ್ಟಿದ್ದರು ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

   ಅಲ್ಲದೆ ಆರೋಪಿಗಳು ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಅನ್ನು ವಿಡಿಯೋ ಮಾಡಿಕೊಂಡಿದ್ದು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ.

   ಮಾಹಿತಿ ಪ್ರಕಾರ, ಕಾಲೇಜಿನಲ್ಲಿ ಓದುತ್ತಿದ್ದ ನವದಂಪತಿ ಈ ವರ್ಷ ವಿವಾಹವಾಗಿದ್ದರು. ಗುಢ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವನಾಥ ದೇವಸ್ಥಾನಕ್ಕೆ ವಿಹಾರಕ್ಕೆಂದು ತೆರಳಿದ್ದರು. ಏಕಾಏಕಿ ಐವರು ಆರೋಪಿಗಳು ಮೊದಲು ಪತಿಗೆ ಥಳಿಸಿದ್ದಾರೆ. ಇದಾದ ಬಳಿಕ ಆತನ ಎದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. 

   ಏತನ್ಮಧ್ಯೆ, ಈ ಘಟನೆಯಲ್ಲಿ ಏಳು-ಎಂಟು ಆರೋಪಿಗಳು ಭಾಗಿಯಾಗಿರುವ ಶಂಕೆ ಇದೆ ಎಂದು ರೇವಾ ಎಸ್ಪಿ ವಿವೇಕ್ ಸಿಂಗ್ ಹೇಳಿದ್ದಾರೆ. ಸಂತ್ರಸ್ತೆ ಐದು ಜನರನ್ನು ಹೆಸರಿಸಿದ್ದಾರೆ. ಎಲ್ಲಾ ಆರೋಪಿಗಳು ಸ್ಥಳದಲ್ಲಿ ಪಾರ್ಟಿ ಮಾಡುತ್ತಿದ್ದರು. ಅಲ್ಲಿ ಲಿಟ್ಟಿ, ಮಾಂಸ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಆರೋಪಿಗಳು ರೇವಾ ಜಿಲ್ಲೆಯವರಾಗಿದ್ದು ಅಕ್ಟೋಬರ್ 21ರಂದು ಘಟನೆ ನಡೆದಿದ್ದು ಅಕ್ಟೋಬರ್ 22ರಂದು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.