ಗ್ಯಾಸ್​ ಸಿಲಿಂಡರ್​ ಬೆಲೆ ಇಳಿಕೆ

ನವದೆಹಲಿ:

   ವಾಣಿಜ್ಯ ಬಳಕೆಯ ಗ್ಯಾಸ್​ ಸಿಲಿಂಡರ್​ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆಯಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.
ಇಂದಿನಿಂದ ಪ್ರಸಕ್ತ ಹಣಕಾಸು ವರ್ಷ ಆರಂಭವಾಗಲಿದ್ದು, ಹಲವು ವಸ್ತುಗಳ ಬೆಲೆ ಏರಿಕೆ ಮಧ್ಯೆ ಸಣ್ಣದೊಂದು ಸಂತಸದ ಸುದ್ದಿ ಹೊರಬಿದ್ದಿದೆ. 19 ಕೆಜಿ ತೂಕದ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ 41 ರೂಪಾಯಿ ಕಡಿತ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ತೈಲ ಕಂಪನಿಗಳು ಹೇಳಿವೆ. ಇನ್ನು ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.