ಬೆಂಗಳೂರು:
ಸ್ನಾನಕ್ಕೆಂದು ಹೋಗಿದ್ದ ತಾಯಿ-ಮಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷದ ತಾಯಿ ಮಂಗಳ 7 ವರ್ಷದ ಗೌತಮಿ ಮೃತ ವ್ಯಕ್ತಿಗಳಾಗಿದ್ದು, ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಘಟನೆ ಸಂಭವಿಸಿದೆ.
ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು.
ಇಂದು ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು ಕರೆದುಕೊಂಡು ತಾಯಿ ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿ ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಆನ್ ಮಾಡಲು ಹೋಗಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆ ಉಂಟಾಗಿದ್ದು, ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸಾವಿಗೀಡಾಗಿದ್ದಾರೆ. ಮನೆ ಮಾಲೀಕರು ಮನೆ ಬಳಿ ಬಂದು ನೋಡಿದಗ ಈ ಘಟನೆ ಕಂಡು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ