ಬೆಂಗಳೂರು :
ಶಿವರಾಜ್ಕುಮಾರ್ ಅವರು ಇತ್ತೀಚೆಗಷ್ಟೇ ಕ್ಯಾನ್ಸರ್ ಚಿಕಿತ್ಸೆ ಪಡೆದು ಬಂದಿದ್ದಾರೆ. ಅವರು ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಿರುವಾಗಲೇ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಅವರ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ. ಕುಟುಂಬದ ಕಡೆಯಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.
ಶಿವರಾಜ್ಕುಮಾರ್ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡ ನಂತರ ಅವರ ಕುಟುಂಬದಲ್ಲಿ ಆತಂಕದ ವಾತಾವರಣ ಮೂಡಿತ್ತು. ಆ ಬಳಿಕ ಶಿವಣ್ಣ ಅವರು ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದರು. ಈಗ ಶಿವರಾಜ್ಕುಮಾರ್ ಆರೋಗ್ಯವಾಗಿದ್ದಾರೆ. ಗೀತಾ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
