ರೈತರಿಗೆ ಸ್ಪಂದಿಸದಿದ್ದರೆ ವರ್ಗಾವಣೆ ಪಡೆಯಿರಿ

ಮಧುಗಿರಿ:
ಕೃಷಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಶಾಸಕರಿಂದ ತರಾಟೆ

ತಾಲ್ಲೂಕಿನಲ್ಲಿ ಕೃಷಿ ಇಲಾಖೆಯ ಬಗ್ಗೆ ಹಲವಾರು ಆರೋಪಗಳಿದ್ದು, ರೈತರ ಪರ ಕೆಲಸ ನಿರ್ವಹಿಸಬೇಕಾದ ಇಲಾಖೆಯೆ ರೈತರಿಗೆ ತಲೆ ನೋವಾಗಿದೆ.

ನಿಮಗೆ ನಿಭಾಯಿಸಲು ಸಾಧ್ಯವಾಗದ್ದಿದ್ದರೆ ವರ್ಗಾವಣೆ ಪಡೆದುಕೊಂಡು ಹೋಗಬಹುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಅವರಿಗೆ ಶಾಸಕ ಎಂ.ವಿ.ವೀರಭದ್ರಯ್ಯನವರು ಕೆ.ಡಿ.ಪಿ.ಸಭೆಯಲ್ಲಿ ನೇರವಾಗಿ ತರಾಟೆಗೆ ತೆಗೆದುಕೊಂಡರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಎಂ.ವಿ.ವೀರಭದ್ರಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ. ಸಭೆಯಲ್ಲಿ ಶಾಸಕರು ಕೃಷಿ ಇಲಾಖೆಯ ಕಾರ್ಯವೈಖರಿ ಬಗ್ಗೆ ತರಾಟೆಗೆ ತೆಗೆದುಕೊಂಡರು.

ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಪರ ಕೆಲಸ ನಿರ್ವಹಿಸಿ, ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪ್ರ್ರಾಮಾಣಿಕವಾಗಿ ತಲುಪಿಸುವ ಕೆಲಸ ನಿರ್ವಹಿಸಿ. ಇಲ್ಲದಿದ್ದರೆ ವರ್ಗಾವಣೆ ಪಡೆದು ಹೊರಟು ಹೋಗಿ, ಬೇರೆಯವರು ಬಂದು ನಿಮ್ಮ ಇಲಾಖೆಯ ಕೆಲಸ ನಿರ್ವಹಿಸುತ್ತಾರೆ.

ತಾಲ್ಲೂಕಿನ ಪ್ರತಿ ಗ್ರಾಮಗಳ ಪೆಟ್ಟಿಗೆ ಅಂಗಡಿಗಳಲ್ಲೂ ಕೂಡ ಮದ್ಯ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಬಕಾರಿ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ ಎಂದು ಅಬಕಾರಿ ನಿರೀಕ್ಷಕ ರಾಮಮೂರ್ತಿ ಅವರನ್ನು ಪ್ರಶ್ನಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಇವುಗಳಿಗೆ ಕಡಿವಾಣ ಹಾಕಿ ಎಂದರು.

ಎತ್ತಿನ ಹೊಳೆ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ತಿಂಗಳಿಗೆ ಕೇವಲ 1 ಕಿಮೀ.ಯಷ್ಟು ದೂರ ಮಾತ್ರ ಕಾಮಗಾರಿ ಸಾಗುತ್ತಿದೆ. ಹೀಗಾದರೆ ಕಾಮಗಾರಿ ಮುಗಿದು ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವುದು ಯಾವಾಗ ಎಂದು ಇಲಾಖೆಯ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದರು.

ಆಗ ಅನುದಾನದ ಕೊರತೆಯಿಂದಾಗಿ ಕಾಮಗಾರಿ ವಿಳಂಬವಾಗುತ್ತಿದ್ದು, ಈಗಾಗಲೇ ಕೆಲಸ ನಿರ್ವಹಿಸಿರುವ ಕಾಮಗಾರಿಯ ಬಾಬ್ತು ಇನ್ನೂ 150 ಕೋಟಿ ರೂ. ಸರಕಾರ ಬಾಕಿ ಪಾವತಿಸಬೇಕಿದೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

ಕೋವಿಡ್ ನಂತರ ಹಾಸ್ಟೆಲ್  ಪರಿಸ್ಥಿತಿ ಹೇಗಿದೆ? ಎಷ್ಟು ವಿದ್ಯಾರ್ಥಿಗಳು ತಾಲ್ಲೂಕಿನಲ್ಲಿ ಹಾಸ್ಟ್ಟೆಲ್ ಪ್ರವೇಶಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂಬ ಪ್ರಶ್ನೆಗೆ, ಕೋವಿಡ್ ಆರಂಭಕ್ಕೂ ಮುಂಚೆ 1593 ವಿದ್ಯಾರ್ಥಿಗಳಿದ್ದು, ಈಗ 1213 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಚಂದ್ರಶೇಖರ್ ಮಾಹಿತಿ ನೀಡಿದರು.

ಹಾಸ್ಟ್ಟೆಲ್‍ಗಳಲ್ಲಿ ಊಟದ ಸೌಲಭ್ಯವನ್ನು ನಿರ್ವಹಿಸಿ, ಮೆನು ಪ್ರಕಾರವೆ ಊಟವನ್ನು ನೀಡಬೇಕು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯು ಜಾಗೃತಿ ವಹಿಸಿ. ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ನ್ಯಾಯಬೆಲೆ ಅಂಗಡಿಗಳನ್ನು ಹೊಸದಾಗಿ ಜಾರಿಯಾಗಿರುವ ಸರಕಾರಿ ಅದೇಶದಂತೆ ತಾಲ್ಲೂಕಿನಲ್ಲಿ ಸುಮಾರು 40 ಹೊಸ ಅಂಗಡಿಗಳನ್ನು ತೆರೆಯಬಹುದು.

ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗಲಿದ್ದು ಗ್ರಾಮಗಳಲ್ಲೇ ನ್ಯಾಯ ಬೆಲೆ ಅಂಗಡಿ ತೆರೆದರೆ ಪಡಿತರದಾರರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ತಾ.ಪಂ. ಇ.ಓ ಲಕ್ಷ್ಮಣ್ ಮಾತನಾಡಿ, ಸರಕಾರದ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಅತಿ ಜರೂರಾಗಿ ಮಾಡಬೇಕು ಹಾಗೂ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಒಳಗೆ ಸಂಪೂರ್ಣವಾಗಿ ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಎಇಇ ರಾಜಗೋಪಲ್, ಜಿ.ಪಂ. ಎಇಇ ಸುರೇಶ್ ರೆಡ್ಡಿ, ಅರಣ್ಯ ಇಲಾಖೆ ಅಧಿಕಾರಿ ರವಿ, ಸಿ.ಡಿ.ಪಿ.ಒ. ಎಸ್.ಅನಿತಾ, ಬಿ.ಇ.ಓ ನಂಜುಂಡಯ್ಯ, ಆರೋಗ್ಯಧಿಕಾರಿ ಡಾ.ರಮೇಶ್ ಬಾಬು,

ಆಹಾರ ಇಲಾಖೆಯ ಶಿರಸ್ತೆ ದಾರ್ ಗಣೇಶ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥಗೌಡ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ರಾಮ್‍ದಾಸ್, ಪುರಸಭೆ ಮುಖ್ಯಾಧಿಕಾರಿ ನಜ್ಮಾ, ಸಾಮಾಜಿಕ ಅರಣ್ಯ ಇಲಾಖೆಯ ತಾರಕೇಶ್ವರಿ, ಬೆಸ್ಕಾಂ ಇಲಾಖೆಯ ಎಇಇ ಶ್ರೀನಿವಾಸ್ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link