ತಡರಾತ್ರಿಯಲ್ಲಿ ಎರಡು ಗುಂಪುಗಳ ನಡುವೆ ಜಗಳ : 4 ಸಾವು…!

ಗುರುದಾಸ್‌ಪುರ:

    ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಟಾಲದ ವಿತ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಎರಡೂ ಗುಂಪಿನಲ್ಲಿ ಒಟ್ಟು 13 ಜನರಿದ್ದರು. 60 ಬಾರಿ ಗುಂಡಿನ ದಾಳಿ ನಡೆದಿದ್ದು ಆ ಪೈಕಿ ನಾಲ್ವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  

   ಗುಂಡಿನ ದಾಳಿಯಲ್ಲಿ ಎರಡೂ ಗುಂಪಿನ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ