ಬೆಂಗಳೂರು
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಗೋರ ಸೇನಾ ರಾಷ್ಟ್ರೀಯ ಸಂಘಟನೆಯಿಂದ ಪ್ರತಿಭಟನೆ ನಡೆಯಿತ್ತು..ರಾಜ್ಯ ಸರ್ಕಾರವು ‘ಸರಿಯಾದ ಅಧ್ಯಯನ ಇಲ್ಲದೆ ಪರಿಶಿಷ್ಟರ ಮೀಸಲಾತಿಯನ್ನು ವರ್ಗೀಕರಿಸಬಾರದೆಂದು ಒತ್ತಾಯಿಸಿ, ಸತ್ಯಾಗ್ರಹದ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಗೋರ ಸೇನಾ ರಾಷ್ಟ್ರೀಯ ಸಂಘಟನೆಯ ರಾಜ್ಯಾಧ್ಯಕ್ಷ ಬಾಳಾಸಾಹೇಬ್ ಪ್ರಜಾ ಪ್ರಗತಿ ಪ್ರತಿನಿಧಿ ಜೊತೆ ಮಾತನಾಡಿ ತಿಳಿಸಿದರು. ಸಾವಿರಕ್ಕೂ ಹೆಚ್ಚುಜನ ಪ್ರತಿಭಟನೆ ಭಾಗಿಯಾಗಿದ್ರು.
ಕರ್ನಾಟಕ ರಾಜ್ಯದ ಬಂಜಾರಾ ಸಮುದಾಯಕ, ಮಾರಕವಾಗಿ ಕಾಡುತ್ತಿರುವ ಒಳಮೀಸಲಾತಿ ಮತ್ತು ವರ್ಗೀಕರಣ ವನ್ನ ವಿರೋಧಿಸಿ. “ಗೋರ್ ಸೇನಾ ರಾಷ್ಟ್ರೀಯ ಸಂಘಟನೆ, ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷರಗಳ ನೇತ್ರತ್ವದಲ್ಲಿ, ರಾಷ್ಟ್ರಪಿತ ಮಹಾತ್ಮಗಾಂಧಿ ರವರವ್ 155ನೇ ಜಯಂತಿಯ ಸಂದರ್ಭದಲ್ಲಿ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ರವರು ಸಂವಿಧಾನಾತ್ಮಕವಾಗಿ ನೀಡಿರುವ ಮೀಸಲಾತಿಯನ್ನು ಅಸಂವಿಧೀನಾತ್ಮಕ ಮತ್ತು ಅವೈಜ್ಞಾನಿಕವಾಗಿ ವರ್ಗಾವಣೆ ಮಾಡಬಾರದೆಂದು ಸರ್ಕಾರವನ್ನು ಒತ್ತಾಯಿಸಿ ಒಂದು ದಿನದ ಸತ್ಯಾಗ್ರಹ ವನ್ನು ಮಾಡಿದ್ರು..
ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯದ ಬೀದರ್, ಗುಲ್ಬರ್ಗ, ಯಾದಗಿರಿ, ಶಿವಮೊಗ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ, ಬಿಜಾಪುರ, ದಾವಣಗೆರೆ, ತುಮಕೂರು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಿಂದ ನೂರಾರು ‘ ಗೋರ್ ಸೇನಾ ‘ ಕಾರ್ಯಕರ್ತರು ಮತ್ತು ಸ್ವಾಭಿಮಾನಿ ಗೋರ್ ಬಂಜಾರಾ ಜನಾಂಗದ ಹಿತ ಚಿಂತಕರು ಭಾಗವಹಿಸಿರುತ್ತಾರೆ.