ರಾಮನಗರ:
ಶಾಸಕ ಇಕ್ಬಾಲ್ ಹುಸೇನ್ ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ ವೀಡಿಯೋ ಹರಿಬಿಟ್ಟು ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದರಿಂದ ನನ್ನ ಮಾನಹಾನಿಯಾಗಿದ್ದು ವೀಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಪೊಲೀಸರಿಗೆ ನೀಡಿರುವಂತ ದೂರಿನಲ್ಲಿ, ಕಾಂಗ್ರೆಸ್ ಶಾಸಕರ ತೇಜೋವಧೆ ಮಾಡಲು ಕೆಲ ಮಂದಿ ನಕಲಿ ವೀಡಿಯೋವನ್ನು ಎಡಿಟ್ ಮಾಡಿ ಹೀಗೆ ಹರಿ ಬಿಟ್ಟಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ