ಕಾವೇರಿ ನೀರು : 1 ತಿಂಗಳು ನೀರು ಹರಿಸಿ : CWRC

ನವದೆಹಲಿ:

     ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

    ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ನೀರು ಹಾಗೂ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ತಮಿಳುನಾಡು ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಇದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವುದಕ್ಕೂ ನೀರು ಸಂಗ್ರಹ ಇಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ.

ಅಂತಿಮವಾಗಿ ತಮಿಳುನಾಡು ಬೇಡಿಕೆ ತಿರಸ್ಕರಿಸಿದ CWRC, ಕರ್ನಾಟಕಕ್ಕೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap