ಕರ್ನಾಟಕಕ್ಕೆ ಮಹದಾಯಿ ನೀರು ತಡೆಯಲು ಗೋವಾ ಪ್ರಯತ್ನ..!

ಪಣಜಿ

       ಕಳಸಾ – ಬಂಡೂರಿ ಡಿಪಿಆರ್‌ಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಗೋವಾ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಕರ್ನಾಟಕಕ್ಕೆ ಮಹದಾಯಿ ನದಿ ನೀರು ಹರಿಸುವುದನ್ನು ತಡೆಯುವ ಪ್ರಯತ್ನದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುಲು ಶುರು ಮಾಡಿವೆ .

    ಈ ಸಾಲಿಗೆ ಹೊಸದಾಗಿ ಸೇರ್ಪಡೆ ಎಂದರೆ ಮಹದಾಯಿ ಉಳಿಸಿ, ಗೋವಾ ಉಳಿಸಿ ಎಂಬ ಅಜೆಂಡಾ ಹೊತ್ತ ನಿಯೋಗವು ಗೋವಾದಲ್ಲಿ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮಹದಾಯಿ ನದಿ ನೀರುವ ಹಂಚಿಕೆ ವಿವಾದದಲ್ಲಿ ತುರ್ತು ಮಧ್ಯಪ್ರವೇಶ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.
    ಮಹದಾಯಿ ಉಳಿಸಿ ಗೋವಾ ಫ್ರಂಟ್‌ನ ನಿಯೋಗವು ಗೋವಾ ಮತ್ತು ಕರ್ನಾಟಕದ ನಡುವೆ ಇರುವ ಮಹದಾಯಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸುವಲ್ಲಿ ಸಹಾಯ ಮಾಡುವಂತೆ ಗೋವಾ ರಾಜ್ಯಪಾಲರಿಗೆ ಮನವಿ ಮಾಡಿದೆ. ಗೋವಾ ರಾಜ್ಯದ ಪರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಹಿಡಿಯುವಂತೆ ಒತ್ತಾಯಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap