ರಾಮನಗರ:
ಜೆಡಿಎಸ್ ಭದ್ರಕೋಟೆಯಲ್ಲಿ ಇಂದು ನಡಿಗೆ ‘ಕೈ’ನಾಯಕರ ನಡಿಗೆ
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದ್ದು ದಿನದಿಂದ ದಿನಕ್ಕೆ ಪ್ರಚಾರ ಹೆಚ್ಚಾಗಿ ಕುತೂಹಲ ಕೆರಳಿಸಿದೆ.
ಇಂದು ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ.
ಇಂದು ರಾಮನಗರದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಲಿದ್ದಾರೆ.
ಇಂದು ಚಿಕ್ಕೇನಹಳ್ಳಿಯಿಂದ ಮೇಕೆದಾಟು ಪಾದಯಾತ್ರೆ ಆರಂಭವಾಗಿ ಅಚ್ಚಲು ಮೂಲಕ ಮಧ್ಯಾಹ್ನ ವೇಳೆಗೆ ಸಾಗಿ ರಾತ್ರಿ ರಾಮನಗರಕ್ಕೆ ತಲುಪಲಿದೆ. ಅಲ್ಲಿ ಕೈ ನಾಯಕರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನೇದಿನೇ ಕೊರೋನಾ ಸೋಂಕು ತಾಂಡವವಾಡುತ್ತಿದ್ದು ಈ ಸಂದರ್ಭದಲ್ಲಿ ಸಾವಿರಾರು ಮಂದಿ ಕೈ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಎಂದು ಹೋಗಿ ಇನ್ನಷ್ಟು ಸೋಂಕನ್ನು ಹಬ್ಬಿಸುತ್ತಿದ್ದೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೈ ನಾಯಕರ ವಿರುದ್ಧ ಈಗಾಗಲೇ ಎರಡೆರಡು ಬಾರಿ ಎಫ್‌ಐಆರ್ ದಾಖಲಾಗಿದೆ. ಆದರೂ ಡೋಂಟ್ ಕ್ಯಾರ್ ಎಂದು ಕೈ ನಾಯಕರು ತಮ್ಮ ಪಾದಯಾತ್ರೆ ಮುಂದುವರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರದ ವಿರುದ್ಧ ಗುಡಿಗಿದ್ದಾರೆ. ಮೇಕೆದಾಟು ಪಾದಯಾತ್ರೆ ಥೀಮ್ ಸಾಂಗ್ ಬಿಡುಗಡೆಯಾಗಿದೆ.
ಇಂದು ಜೆಡಿಎಸ್ ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಮುಂದುವರಿಯಲಿದ್ದು, ಜೆಡಿಎಸ್ ಗೆ ಟಕ್ಕರ್ ಕೊಡಲು ಡಿಕೆಎಸ್ ಟೀಂ ಸಿದ್ದವಾಗಿದೆ. ದಳ ಕೋಟೆಯಲ್ಲಿ ನೀರಿಗಾಗಿ ನಡಿಗೆ ಮಾಡುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಲಿದೆ.
ಇಂದು ಕೂಡ ಸಿದ್ದರಾಮಯ್ಯ ಭಾಗಿ:
ಮೊದಲ ದಿನ ಜ್ವರ ಹಿನ್ನೆಲೆಯಲ್ಲಿ ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದ ಸಿದ್ದರಾಮಯ್ಯ ನಿನ್ನೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು, ಕನಕಪುರದಲ್ಲಿ ನಿನ್ನೆ ಡಿ ಕೆ ಶಿವಕುಮಾರ್ ಜೊತೆಗೆ ಹೆಜ್ಜೆ ಹಾಕಿದ್ದರು. ನಿನ್ನೆ ಎಂಟತ್ತು ಕಿಲೋ ಮೀಟರ್ ಹೆಜ್ಜೆ ಹಾಕಿದ ಸಿದ್ದರಾಮಯ್ಯ ರಾತ್ರಿ ಕನಕಪುರದಲ್ಲಿ ಉಳಿದುಕೊಂಡು ಇಂದು ಬೆಳಗ್ಗೆ ಹೊರಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ