ತುಮಕೂರು:
ಚಿರತೆಯೊಂದು ಕುರಿ ರೊಪ್ಪಕ್ಕೆ ನುಗ್ಗಿ ಕುರಿ ಹಾಗೂ ಮೇಕೆಯನ್ನು ಸಾಯಿಸಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಬೊಮ್ಮಲದೇವಿಪುರ ಗಡಿಭಾಗದ ಅವದಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವದಾರನಹಳ್ಳಿಯ ಮೂರ್ತಪ್ಪ ಎಂಬುವರಿಗೆ ಸೇರಿದ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ ಕುರಿ ಹಾಗೂ ಮೇಕೆಯನ್ನು ತಿಂದು ಹಾಕಿದೆ. ಎರಡು ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಯಾವ ಕ್ರಮ ಕೈಗೊಂಡಿರಲಿಲ್ಲ. ಈಗ ಮತ್ತೆ ಚಿರತೆ ಕಾಣಿಸಿಕೊಂಡಿರುವುದರಿಂದ ಜನ ಆತಂಕದಲ್ಲಿ ಬದುಕು ಸಾಗಿಸುವಂತಾಗಿದೆ. ಈಗಲಾದರೂ ಅರಣ್ಯ ಇಲಾಖೆ ಎಚ್ಚೆತ್ತು ಚಿರತೆಯನ್ನು ಹಿಡಿಯುವ ಕಾರ್ಯಕ್ಕೆ ಮುಂದಾಗಲಿ ಎಂಬುದು ಈ ಭಾಗದ ಸಾರ್ವಜನಿಕರ ಆಗ್ರಹ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ