ಚಿತ್ರದುರ್ಗ:
ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ, ಬಸವ ಜಯಂತಿಯ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಯೂರೋಪ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ!
ಈ ಕಾರ್ಯಕ್ರಮವು ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುರುಘಾ ಶ್ರೀಗಳು ನೀಡುವಂತ ಮರಣೋತ್ತರ ಪುನೀತ್ ರಾಜ್ ಕುಮಾರ್ ಗೆ ಬಸವಶ್ರೀ ಪ್ರಶಸ್ತಿಯನ್ನು, ರಾಜ್ ಕುಟಂಬವು ಸ್ವೀಕರಿಸಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
