ಬೆಂಗಳೂರು :
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶೀಘ್ರವೇ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.
ಕೋರಮಂಗಲದ ಬೆಟಾಲಿಯನ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದನ್ನು ಸರಿದೂಗಿಸಲು ಸದ್ಯದಲ್ಲೇ 2 ಸಾವಿರಕ್ಕೂ ಹೆಚ್ಚು ಕಾನ್ಸ್ ಟೇಬಲ್ ನೇಮಕಾತಿಗೆ ನೋಟಿಫಿಕೇಷನ್ ಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ, ಭಾರತಕ್ಕೆ ಧನ್ಯವಾದ: ಬ್ರಿಟನ್ ಪ್ರಧಾನಿ
ಈಗಾಗಲೇ 4,000 ಪೊಲೀಸ್ ಕಾನ್ಸ್ ಟೇಬಲ್ ಪೊಲೀಸ್ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಶೀಘ್ರವೇ ಇನ್ನೂ 2 ಸಾವಿರಕ್ಕೂ ಹೆಚ್ಚು ಕಾನ್ಸ್ ಟೇಬಲ್ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ