ಬೆಂಗಳೂರು:
ಉಕ್ರೇನ್ ನಿಂದ ವಾಪಸ್ ಆಗಿರುವ ಮೆಡಿಕಲ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ರಾಜ್ಯದಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳ ಜತೆ ಸಭೆ ನಡೆಸಿದ ಸಚಿವ ಸುಧಾಕರ್, ಉಕ್ರೇನ್ ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಶಿಕ್ಷಣ ಮುಂದುವರೆಸಲು ವ್ಯವಸ್ಥೆ ಮಾಡಲಾಗುವುದು.
ಸಾವಿನಲ್ಲೂ ಸಾರ್ಥಕತೆ- ಡಾಕ್ಟರ್ ಆಗಬೇಕೆಂದು ಹಂಬಲಿಸಿದ್ದ ನವೀನ್ ಮೃತದೇಹ ವಿದ್ಯಾರ್ಥಿಗಳ ಅಧ್ಯಯನಕ್ಕೆ
ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿದ್ದು, ಈ ಕಾಲೇಜುಗಳಲ್ಲಿ ಅವರ ಕಲಿಕೆ ಮುಂದುವರೆಯುವ ನಿಟ್ಟಿನಲ್ಲಿ ಒಂದು ಸಮಿತಿ ರಚನೆ ಮಾಡಲಾಗಿದೆ ಎಂದರು.
ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ್ದು, ಅವರ ವಿದ್ಯಾಭ್ಯಾಸ ನಿಂತುಹೋಗಿದೆ. ಹಾಗಾಗಿ ಅವರ ಕಲಿಕೆ ಮುಂದುವರೆಯಬೇಕು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 60 ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸುವ ಬಗ್ಗೆ ವಿಸಿಯವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಸಧ್ಯಕ್ಕೆ ವಿದ್ಯಾರ್ಥಿಗಳು ಯಾವುದೇ ಶುಲ್ಕ ಕಟ್ಟುವ ಅಗತ್ಯವಿಲ್ಲ. ಸಮಿತಿ ವರದಿ ಬಂದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ