ಬೆಂಗಳೂರು:
ರಜಾ ಅವಧಿಯಲ್ಲಿ ಕೋವಿಡ್-19 ಕಾರ್ಯಗಳಿಗೆ ನಿಯೋಜಿಸಿರುವಂತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ, ಗಳಿಕೆ ರಜೆಯನ್ನು ಮಂಜೂರು ಮಾಡಲಾಗಿದೆ. ಈ ಮೂಲಕ ಕೋವಿಡ್ ಕರ್ತವ್ಯ ನಿರ್ವಹಿಸಿದ್ದಂತ ಪಿಯು ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳನ್ನು ರಜಾ ಅವಧಿಯಲ್ಲಿ ಕೋವಿಡ್ ಕಾರ್ಯಗಳಿಗೆ ನಿಯೋಜಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಅವರಿಗೆ ಕೆಸಿಎಸ್ಆರ್ ನಿಯಮ 113(3)(ಬಿ) ರನ್ವಯ ಗಳಿಕ ರಜೆ ಮಂಜೂರು ಮಾಡಲು ಅವಕಾಶ ಇರುತ್ತದೆ. ಹೀಗಾಗಿ ರಜಾ ಅವಧಿಯಲ್ಲಿ ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ್ದಂತ ಉಪನ್ಯಾಸಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ