ಬೆಂಗಳೂರು:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ರಜೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಮೇ 16 ರಿಂದ 2022 -23 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿವರ್ಷ ಮೇ 29 ರಂದು ಶಾಲೆ ಆರಂಭವಾಗುತ್ತಿತ್ತು. ಕೊರೋನಾ ಕಾರಣದಿಂದ ಎರಡು ವರ್ಷ ಶೈಕ್ಷಣಿಕ ಅವಧಿ ವಿಳಂಬವಾಗಿದೆ.
ಈ ಬಾರಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಅವಧಿ ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ತಾಪಮಾನ ಮುಂದುವರೆದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬೇಸಿಗೆ ರಜೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ