ದೂರ ಶಿಕ್ಷಣ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ…!

ಮೈಸೂರು: 

    ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕೆಎಸ್‌ಒಯು ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ .

    ಇತ್ತೀಚೆಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (NAAC) ನಿಂದ A+ ಮಾನ್ಯತೆ ಪಡೆದಿರುವ ಕೆಎಸ್ಒಯು ಕಲಿಯುವವರ ಮನೆ ಬಾಗಿಲಿಗೆ ಉನ್ನತ ಶಿಕ್ಷಣವನ್ನು ಕೊಂಡೊಯ್ಯಲು ವಿವಿಧ ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಇದರ ಭಾಗವಾಗಿ, ರಾಜ್ಯದ ಎಲ್ಲಾ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡಿರುವ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರಗಳು ಮತ್ತು ಸ್ಟಡಿ ಸೆಂಟರ್‌ಗಳನ್ನು ತೆರೆಯಲು ನಿರ್ಧರಿಸಿದ್ದಾರೆ.

    ಕೆಎಸ್ಒಯು ಅಧಿಕಾರಿಗಳು ಇತ್ತೀಚೆಗೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರನ್ನು ಭೇಟಿ ಮಾಡಿ, ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಕೇಂದ್ರಗಳನ್ನು ನಡೆಸಲು ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿ, ಒಪ್ಪಿಗೆ ಪಡೆದಿದ್ದರು. 

    ವಿಶ್ವವಿದ್ಯಾನಿಲಯವು ಎಲ್ಲಾ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲು ಕೇಂದ್ರಗಳನ್ನು ಹೊಂದಿಲ್ಲದ ಕಾರಣ, ನಾವು ಸಚಿವರನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇವೆ. ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೊಠಡಿ ನೀಡಲು ಸಚಿವರು ಒಪ್ಪಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap