ಬೆಂಗಳೂರು :
ಸುಮಾರು 2,00,000 ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಉಲ್ಲೇಖ 1ರನ್ವಯ ಸರ್ಕಾರವು ದಿನಾಂಕ:31-12-2023ರವರೆಗೆ ಸಮಯಾವಕಾಶ ವಿಸ್ತರಿಸಿ, ಆದೇಶ ಹೊರಡಿಸಿರುತ್ತದೆ.
ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ನಿಗಮ-ಮಂಡಳಿಗಳಲ್ಲಿ ವರ್ಗದವರು, ಅನುತ್ತೀರ್ಣರಾದವರು, ನೋಂದಾವಣೆ ಮಾಡಿ ಪರೀಕ್ಷೆ ತೆಗೆದುಕೊಳ್ಳದೇ ಇರುವವರೂ ಸಹ ದಿನಾಂಕ:31-12-2023ರ ಒಳಗಾಗಿ ಉತ್ತೀರ್ಣರಾಗಬೇಕಾಗಿರುತ್ತದೆ.
ಉಲ್ಲೇಖಿತ (2)ರ ಸುತ್ತೋಲೆಯನ್ನಯ ದಿನಾಂಕ: 31-12-2023ರೊಳಗೆ ಹಾಗೂ ನೇರ ನೇಮಕಾತಿ ಹೊಂದಿದ ನೌಕರರು ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.
ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವದಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ