ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ….!

ಬೆಂಗಳೂರು :

   ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ.

   ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಲೆಕ್ಕ ಶೀರ್ಷಿಕೆ 2202-00-101-0-61-324ರಡಿ ಲಭ್ಯವಿರುವ ರೂ.24941.25ಲಕ್ಷಗಳನ್ನು ಬಿಡುಗಡೆಗೊಳಿಸಲು ಅನುಮೋದನೆ ನೀಡಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ.

   ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನಗಾಗಿ ಅಗತ್ಯವಿರುವ ರೂ.24941.25ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕೆ 2202-01-197-1-01-300ರಡಿ ಈ ಕೆಳಕಂಡಂತೆ ಆದೇಶಿಸಲಾಗಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1 ರ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಾಲಂ 5ರಲ್ಲಿ ತೋರಿಸಿದಂತೆ ಲೆಕ್ಕ ಶೀರ್ಷಿಕೆ 2202-01- 197-1-01-300ರಡಿ ರೂ.24941.25ಲಕ್ಷ ಗಳನ್ನು ಬಿಡುಗಡೆಗೊಳಿಸಿದೆ.

Recent Articles

spot_img

Related Stories

Share via
Copy link