ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್

ಬೆಂಗಳೂರು:

   ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು ಬೇಗ ಆರಂಭಿಸಲು ನಿರ್ಧರಿಸಿದೆ.

    ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ.ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರು ದಿನ ಮಂಗಳವಾರದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿವೆ.

    ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಸೇವೆಗಳು ಬೇಗನೆ ಪ್ರಾರಂಭವಾಗುವುದರಿಂದ, ಹಳದಿ ಮಾರ್ಗದಲ್ಲೂ ಸೇವೆ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದರು, ಪ್ರಯಾಣಿಕರ ಪ್ರತಿಭಟನೆ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಸೋಮವಾರ ಬೆಳಿಗ್ಗೆ ತಮ್ಮ ಊರುಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರ ಸಂಖ್ಯೆಯಲ್ಲಿನ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರಿಷ್ಕೃತ ಸೋಮವಾರದ ವೇಳಾಪಟ್ಟಿಯನ್ನು ಎಲ್ಲಾ ಹಳದಿ ಮಾರ್ಗದ ನಿಲ್ದಾಣಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link