ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ…!

ಬೆಂಗಳೂರು

     ಬೆಳಗಾವಿ ನಗರ ಮತ್ತು ತಾಲೂಕು ಸೇರಿದಂತೆ ಜಿಲ್ಲೆಯ ಖಾನಾಪೂರ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಚನ್ನಮ್ಮ ಕಿತ್ತೂರು, ಹುಕ್ಕೇರಿ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ ಹಾಗೂ ಗೋಕಾಕ ತಾಲೂಕುಗಳ ಎಲ್ಲ ಕಡೆಗಳಲ್ಲಿಯೂ ಕಳೆದ ಮರ‍್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದು, ಕೆಲವೆಡೆ ಇಂದು ಮಳೆ ಮುಂದುವರೆದಿದೆ.

     ಖಾನಾಪೂರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ತಾಲೂಕಿನ ನಾಗರಗಾಳಿ, ಗುಂಜಿ, ಲೋಂಡಾ, ಹೆಮ್ಮಡಗಾ, ನೇರಸೆ ಜಾಂಬೋಡಿ, ಕಣಕುಂಬಿ ಸೇರಿದಂತೆ ಸುತ್ತಲಿನ ಗ್ರಾಮಗಳು ಸತತ ಮಳೆಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿವೆ.

     ಹೆದ್ದಾರಿ ಮೇಲಿನ ಸೇತುವೆ ಅಲಾತ್ರಿ ಹಳ್ಳದಲ್ಲಿ ಮುಳಗಡೆಯಾದ ಪರಿಣಾಮ ಭೀಮಗಡ ವನ್ಯಧಾಮಕ್ಕೆ ಸಂಪರ್ಕ ಕಲ್ಪಿಸುವ 40ಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಚಿಕ್ಕೋಡಿ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ ಮಹಾರಾಷ್ಟçದ ಘಟ್ಟದ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಕೃಷ್ಣಾ ಹಾಗೂ ಅದರ ಉಪ ನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap