ವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌ ….!

ಬೆಂಗಳೂರು

   ಗೂಗಲ್‌ ಮ್ಯಾಪ್‌ ದಾರಿಯನ್ನ ತೋರಿಸುವ ಗೆಳೆಯ. ಆದ್ರೆ ಅದೇ ಮ್ಯಾಪ್‌ನಲ್ಲಿ ಮಗ್ನನಾಗಿದ್ದ ಕಾರು ಚಾಲಕ ದುರಂತ ಸಾವು ಕಂಡಿದ್ದಾನೆ. ಶರವೇಗದಲ್ಲಿ ಹೋಗುತ್ತಿದ್ದ ಕಾರು ಹೈವೇನಲ್ಲಿ ಪಲ್ಟಿ ಹೊಡೆದಿದೆ. ಸೈಡ್‌ನಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಡಿಕ್ಕಿಯಾದ ಕಾರು ಮೂರು ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವೈದ್ಯ ಸ್ಥಳದಲ್ಲೇ ಸಾವಿನ ಮನೆ ಸೇರಿದ್ದಾನೆ. ಅಷ್ಟಕ್ಕೂ ಈ ಭೀಕರ ಅಪಘಾತಕ್ಕೆ ಕಾರಣವೇ ಗೂಗಲ್ ಮ್ಯಾಪ್‌.

   ಹೈದ್ರಾಬಾದ್‌ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಅನ್ನೋ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಬೇಕು ಎಂದು ಕಾರು ಏರಿದ್ದಾರೆ . ಬೆಳಗಿನಜಾವ 2 ಗಂಟೆಗೆ ಹೈದ್ರಾಬಾದ್‌ನಿಂದ ಹೊರಟವರು, ಬೆಳಗ್ಗೆ 10 ಗಂಟೆ ಹೊತ್ತಿಗೆ ಹೊಸಕೋಟೆ ಬಳಿ ಬಂದಿದ್ದರು. ದೇವನಹಳ್ಳಿ ಮೂಲಕ ಹೊಸಕೋಟೆಗೆ ಬರುತ್ತಿದ್ದ ಕಾರು, ಕೋಲಾರದ ಹೆದ್ದಾರಿ ಕಡೆ ಯೂಟರ್ನ್ ಪಡೆಯೋಕೆ ಹೋಗಿದೆ. ಈ ವೇಳೆ ಗೂಗಲ್‌ ಮ್ಯಾಪ್‌ ನೋಡುತ್ತ ಕಾರು ಚಾಲನೆ ಮಾಡಿದ ಚಾಲಕ, ಮ್ಯಾಪ್‌ನತ್ತಲೇ ಹೆಚ್ಚು ಗಮನಹರಿಸಿದ್ದಾನೆ. ಇದರಿಂದ ನೋಡ ನೋಡುತ್ತಿದ್ದಂತೆಯೇ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರ್‌ನ ಹಿಂಭಾಗದಲ್ಲಿ ಕೂತಿದ್ದ ಹೈದರಾಬಾದ್ ಮೂಲದ ವೈದ್ಯ ಅಮರ್ ಪ್ರಸಾದ್ ಸ್ಥಳದಲ್ಲೆ ಸಾವನ್ನಪಿದ್ದಾನೆ.
   ಇನ್ನು ಸ್ಥಳದಲ್ಲಿದ್ದವರು, ಕಾರ್‌ನಲ್ಲಿದ್ದ ವೈದ್ಯೆ ಪ್ರವಳಿಕಾ ಮತ್ತು ವೇಣು ಅನ್ನೋರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ . ಸಣ್ಣಪುಟ್ಟ ಗಾಯದೊಂದಿಗೆ ಇಬ್ಬರು ಬದುಕುಳಿದಿದ್ದಾರೆ .

Recent Articles

spot_img

Related Stories

Share via
Copy link