ಬೆಂಗಳೂರು:
ವಂಚನೆ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಎಂಎಲ್ ಸಿ ಟಿಕೆಟ್ ಗಾಗಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡು ಆಪ್ತರ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ವಿಜಯಲಕ್ಷ್ಮೀ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
