ಕೊರಟಗೆರೆ :
ಕೊರೊನಾ ರೋಗದ ಲಾಕ್‍ಡೌನ್ ಮತ್ತು ಸೀಲ್‍ಡೌನ್ ನಡುವೆಯು ಕರುನಾಡಿನ ಇತಿಹಾಸ ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದ ಹುಂಡಿಗೆ ಸಾವಿರಾರು ಭಕ್ತಾದಿಗಳಿಂದ 49 ಲಕ್ಷಕ್ಕೂ ಅಧಿಕ ಹಣ ಮತ್ತು ಬಂಗಾರದ ಒಡವೆ ಇರುವುದು ಬುಧವಾರ ಎಣಿಕೆಯ ಸಂದರ್ಭದಲ್ಲಿ ಕಂಡು ಬಂದಿದೆ.
ಕಲ್ಪತರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಕಳೆದ 4 ತಿಂಗಳಿಂದ ಸಂಗ್ರಹಣೆ ಆಗಿದ್ದ 8 ಹುಂಡಿಗಳಿಂದ 49,89,780 ರೂ. ನಗದು ಹಣದ ಜೊತೆ ಲಕ್ಷಾಂತರ ರೂ.ಮೌಲ್ಯದ ಬಂಗಾರದ ಒಡವೆಯೂ ಸಹ ಸಂಗ್ರಹಣೆಯಾಗಿ ಮಹಾಲಕ್ಷ್ಮೀ ದೇವಾಲಯದ ಖಾತೆಗೆ ಜಮಾ ಆಗಿದೆ.
ಸಾವಿರಾರು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಕ್ಷಾಂತರ ರೂಪಾಯಿ ಹಣದ ಜೊತೆಗೆ ಬಂಗಾರದ ತಾಳಿ ದೊಡ್ಡದು-1, ಚಿಕ್ಕದು-5, ನತ್ತು-3, ಬೆಳ್ಳಿಯ ಲಕ್ಷ್ಮೀ ಮುಖವಾಡ-1, ಬಳೆ-1, ಬಿಸ್ಕತ್ತು-2, ಕಾಲುಚೈಲು-4, ಲಕ್ಷ್ಮೀನಾಣ್ಯ-1, ಕಾಲುಂಗರ-2, ತಾಳಿ-2, ಕಣ್ಣು-2, ನಾಗಪ್ಪ-1 ವಿಗ್ರಹ ಸೇರಿ ಲಕ್ಷಾಂತರ ಮೌಲ್ಯದ ಒಡವೆಯನ್ನು ಭಕ್ತಾದಿಗಳು ಮಹಾಲಕ್ಷ್ಮಿ ದೇವಾಲಯದ ಹುಂಡಿಗೆ ಹಾಕಿದ್ದಾರೆ.
ಹುಂಡಿಯ ಎಣಿಕೆ ವೇಳೆಯಲ್ಲಿ ಕೋಳಾಲ ಉಪತಹಸೀಲ್ದಾರ್ ಮಧುಸೂದÀನ್, ಆಹಾರ ಶಿರಸ್ತೆದಾರ ನರಸಿಂಹಮೂರ್ತಿ ಸೇರಿದಂತೆ 40 ಕ್ಕೂ ಅಧಿಕ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಮಹಾಲಕ್ಷ್ಮೀ ದೇವಾಲಯದ ಸಿಬ್ಬಂದಿ ವರ್ಗದಿಂದ ಎಣಿಕೆ ಕಾರ್ಯ ಪೂರ್ಣಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ