ಗೊರವನಹಳ್ಳಿ ದೇವಾಲಯ ಮೇ 4 ವರಗೆ ಬಂದ್

ಕೊರಟಗೆರೆ : 

      ತಾಲ್ಲೂಕಿನ ಪ್ರಸಿದ್ದ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯವನ್ನು ಕೋವಿಡ್ ರೋಗದ ಹಿನ್ನೆಲೆಯಲ್ಲಿ ಏ.21 ರಿಂದ ಮೇ 4 ವರೆಗೂ ಬಂದ್ ಮಾಡಲಾಗಿದ್ದು, ಭಕ್ತಾಧಿಗಳಿಗೆ ದೇವಿಯ ದರ್ಶನ ಲಭ್ಯವಿಲ್ಲ ಎಂದು ದೇವಾಲಯದ ಆಡಳಿತ ಮಂಡಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

      ಪತ್ರಿಕಾ ಪ್ರಕಟಣೆಯಲ್ಲಿ ಆಡಳಿತ ಮಂಡಲಿ ಕಾರ್ಯ ನಿರ್ವಹಣಾಧಿಕಾರಿ ಕೇಶವಮೂರ್ತಿ, ಸರ್ಕಾರದ ಆದೇಶದಂತೆ ಕೋವಿಡ್-19 ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಏ.21 ರಿಂದ ಮೇ 4 ರವರೆಗೂ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.

      ಈ ಹಿನ್ನೆಲೆಯಲ್ಲಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯ ಮತ್ತು ದಾಸೋಹ ಕೇಂದ್ರವನ್ನು ಬಂದ್ ಮಾಡಿ, ಭಕ್ತಾದಿಗಳು ಹಾಗೂ ಸಾರ್ವಜನಿಕರು ಪ್ರವೇಶ ಮಾಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದು, ಭಕ್ತಾದಿಗಳು ಮೇ 4 ವರೆಗೆ ದೇವಾಲಯಕ್ಕೆ ಆಗಮಿಸಬಾರದೆಂದು ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link