ಬೆಂಗಳೂರು:
ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಬುಧವಾರ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ.
ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನಚರಣೆ ಹಿನ್ನೆಲೆಯಲ್ಲಿ ಜಾತಿ, ಧರ್ಮ, ವಯಸ್ಸಿನ ಮಿತಿ ಇಲ್ಲದೇ ಯೋಗ ಹಬ್ಬ ನಡೆಯುತ್ತಿದೆ. ನಗರದ ಹಲವು ಕಾಲೇಜು, ಪಾರ್ಕ್, ಗ್ರೌಂಡ್ ಗಳಲ್ಲಿ, ನಗರದ ಪಿಇಎಸ್ ಯೂನಿವರ್ಸಿಟಿಯಲ್ಲಿ ಯೋಗ ದಿನವನ್ನು ಆಯೋಜನೆ ಮಾಡಲಾಗಿದೆ.
ಬೆಳ್ಳಗ್ಗೆ 7 ಗಂಟೆಗೆ ಆರಂಭವಾಗಿ 10 ಗಂಟೆಯವರೆಗೂ ಯೋಗ ದಿನ ನಡೆಯಲಿದೆ. ಯೋಗ ಡೇ ಟೀ ಶರ್ಟ್ ಧರಿಸಿ ಯೋಗ ಡೇಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
