ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ : ಬಿಜೆಪಿ ಬೆದರಿಕೆ ತಂತ್ರ ಅನುಸರಿಸುತ್ತಿದೆ : ಡಿ ಕೆ ಶಿವಕುಮಾರ್‌

ಬೆಂಗಳೂರು:

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗುವುದು ಎಂದು ಮತದಾರರಿಗೆ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ್ ಗೌಪ್ಯವಾಗಿ ಏನು ಮಾಡಲು ಪ್ರಯತ್ನಿಸುತ್ತಿದ್ದಾರೆ? ನಾಟಕವಾಡುವ ಮೂಲಕ ಕರ್ನಾಟಕವನ್ನು ರಾಜ್ಯಪಾಲರ ಅಧೀನದಲ್ಲಿಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರ ಯೋಜನೆ ಹೇಗೆಯೇ ಇದ್ದರು, ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ ಎಂದು ಹೇಳಿದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಕರ್ನಾಟಕ ರಾಜ್ಯವು ದೇಶದಲ್ಲೇ ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೊಂದಿದೆ ಎಂದು ತಿಳಿಸಿದರು.

   ಕಳೆದ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಹಲವಾರು ಅಪರಾಧ ಘಟನೆಗಳು ಸಂಭವಿಸಿದ್ದು, ಈ ಘಟನೆಗಳ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದೆ. ಅಲ್ಲದೆ. ತುಷ್ಟೀಕರಣ ರಾಜಕಾರಣಕ್ಕಾಗಿ ಇನ್ನೂ ಎಷ್ಟು ಹಿಂದೂ ಜೀವಗಳನ್ನು ಬಲಿಕೊಡಲು ಬಯಸುತ್ತಿದ್ದೀರಿ ಎಂದೂ ಪ್ರಶ್ನಿಸಿದೆ.

   ಕಳೆದ 48 ಗಂಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಮತಾಂಧ ಜಿಹಾದಿ ಬ್ರದರ್ಸ್‌ಗಳು ನಿರಂತರವಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಲವ್ ಜಿಹಾದ್‌ಗೆ ಒಪ್ಪದ ಹಿಂದೂ ಯುವತಿಯ ಹತ್ಯೆ, ಒಡೆಯರ್ ಪರವಾಗಿ ಪ್ರಚಾರ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹರಿಸಿ ಹತ್ಯೆ, ಹಿಂದೂಗಳ ಕಾರು ತಡೆದು ಹಲ್ಲೆಯಂತಹ ಐದಾರು ಘಟನೆಗಳು ನಡೆದಿವೆ. ಮಜಾವಾದಿ ‌ಸಿದ್ದರಾಮಯ್ಯ ಅವರು ಹಾಗೂ ಡಿಕೆ.ಶಿವಕುಮಾರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ. ಕರ್ನಾಟಕವನ್ನು ಪಾ’ಕೈ’ಸ್ತಾನ ಮಾಡಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರವನ್ನು ಈ ಬಾರಿ ಮತದಾರರು ಖಂಡಿತವಾಗಿ ತಿರಸ್ಕರಿಸಿ ಪಾಠ ಕಲಿಸಬೇಕಿದೆ ಎಂದು ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap