ಮಹಾದಾಯಿ : ಪ್ರಾಧಿಕಾರ ರಚನೆಗೆ ಅಸ್ತು ಎಂದು ಕೇಂದ್ರ ಸರ್ಕಾರ

ಬೆಂಗಳೂರು:

     ಗೋವಾ ಮತ್ತು ಕರ್ನಾಟಕದ ನಡುವೆ ಜಗಳಕ್ಕೆ ಕಾರಣವಾಗಿರುವ  ಮಹದಾಯಿ ನದಿಗೆ ಹೊಸದಾಗಿ ಪ್ರಾಧಿಕಾರ ರಚನೆ ಮಾಡಲು ಕೇಂದ್ರ ಹಸಿರು ನಿಶಾನೆ ತೋರಿದೆ ಎನ್ನಲಾಗಿದೆ .

     ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ್ ಪ್ರಾಧಿಕಾರ’ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒ‌ಪ್ಪಿಗೆ ನೀಡಿದೆ.

ಈ ಪ್ರಾಧಿಕಾರವು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮಾದರಿಯಲ್ಲೇ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಅನುಸಾರ ರಚನೆಯಾಗಿದೆ. ಈ ಪ್ರಾಧಿಕಾರದ ಮುಖ್ಯ ಉದ್ದೇಶವೆಂದರೆ ಪ್ರಾಧಿಕಾರದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿದೆ.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಮಹದಾಯಿ ಪ್ರವಾಹ್ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. “ಇದು ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ತೀರ್ಪು ಮತ್ತು ನಿರ್ಧಾರಗಳ ಅನುಸರಣೆ, ಅನುಷ್ಠಾನಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ನಡುವೆ ಪರಸ್ಪರ ನಂಬಿಕೆ ಮತ್ತು ವಿಶ್ವಾಸದ ನಿರ್ಮಾಣಕ್ಕೆ ಇದು ನೆರವಾಗಲಿದೆ. ಈ ಮೂಲಕ ಈ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯನ್ನು ಖಾತರಿಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಮಹದಾಯಿ ಜಲ ವಿವಾದ ಸಂಬಂಧ ಪ್ರಾಧಿಕಾರ ರಚನೆ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap