ಬಿಯರ್ ಪ್ರಿಯರಿಗೆ ಷಾಕ್‌ ನೀಡಲು ಮುಂದಾದ ಸರ್ಕಾರ…..!

ಬೆಂಗಳೂರು

     ಬಸ್​ ಟಿಕೆಟ್​ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ  ಬಜೆಟ್​ಗೆ ಮುನ್ನವೇ ಬಿಯರ್​  ದರ ಏರಿಕೆ ಮಾಡಿದೆ.

   ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
   ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
   ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.

Recent Articles

spot_img

Related Stories

Share via
Copy link