ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ…..!

ಬೆಂಗಳೂರು:

    ರಾಜ್ಯಾದ್ಯಂತ ಪಡಿತರ ಚೀಟಿಗೆ  ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ   ತಿಳಿಸಿದ್ದಾರೆ.

    ವಿಧಾನಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

    ಸದನದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ಲವೇ ಎಂದು ಪ್ರಶ್ನಿಸಿದರು.

   ವಿಧಾನಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್‌ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ.

     ಇದಕ್ಕೆ ದನಿಗೂಡಿಸಿದ ವಿಪಕ್ಷ ನಾಯಕ ಆರ್ ಅಶೋಕ್, ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು ಗ್ಯಾರಂಟಿಗಳಿಗೆ ಜನರ ಸಂಖ್ಯೆ ಹೆಚ್ಚಾಗಬಾರದು ಅಂತ ಬಿಪಿಎಲ್ ಕಾರ್ಡ್ ಕೊಡುತ್ತಿಲ್ವಾ? ಇದುವರೆಗೆ ಎಷ್ಟು ಬಿಪಿಎಲ್ ಕೊಟ್ಟಿದ್ದೀರಿ ತಿಳಿಸಿ ಎಂದರು.

    ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಮುನಿಯಪ್ಪ, ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್‌ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಲಾಗಿದೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ.

    ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್‌ಗಳನ್ನು ವಿತರಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದರ ಆದೇಶ ಹೊರಡಿಸಲಾಗಿದೆ. ಈ ಕೆಲಸ ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ

Recent Articles

spot_img

Related Stories

Share via
Copy link
Powered by Social Snap