ಬೆಂಗಳೂರು:
ರಾಜ್ಯದ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯಿದೆ. ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ.
ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 10 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕವಿತಾ ಅವರು ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://ssp.postmatric.karnataka.gov.in . ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ನ್ನು ಸಂಪರ್ಕಿಸಬಹುದು. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.