ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು:

   ಕರ್ನಾಟಕದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಮತ್ತೆ ವಿದ್ಯುತ್ ದರ   ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ   ಗ್ರಾಹಕರಿಗೆ ಶಾಕ್ ನೀಡಿದೆ.

    ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ   ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

   ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.    ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್‌ ಪಾಟೀಲ್, ‘ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರು. 

   ‘ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ’ ಎಂದರು.ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.

Recent Articles

spot_img

Related Stories

Share via
Copy link