ರಾಜ್ಯದ ಜನರ ಮುಂದೆ ರಾಜ್ಯ ಸರ್ಕಾರ ಬೆತ್ತಲಾಗಿದೆ : ಎ ನಾರಾಯಣ ಸ್ವಾಮಿ

ತುಮಕೂರು:

    ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ..

    ತುಮಕೂರು ನಗರದಲ್ಲಿ ದಿಶಾ ಸಭೆಗು ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು, ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ.ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ.

    ನ್ಯಾಯಾಲಯದ ಮುಂದೆಯೇ ಕ್ಲೀನ್ ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದು ಹೇಳಿದರು.

    ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್ ಹಾಕಿದಂತಿದೆ. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ ಎಂದರು..

    ಒಂದು ಸಲ ಎಫ್.ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು. ಪ್ರಕರಣಗಳು ಒಂದು ಸಲ ಕೋರ್ಟ್ ಗೆ ಹೋದ್ರೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ಕ್ಯಾಬಿನೆಟ್ ಗೆ ಯಾವುದೇ ಅಧಿಕಾರ ಇಲ್ಲ ಅನ್ನೋದು ನನ್ನ ಅಭಿಪ್ರಾಯ ಎಂದರು.

   ಕಾನೂನಾತ್ಮಕವಾಗಿ ಪ್ರಕ್ರಿಯೆ ನಡೆದಿರಲಿಲ್ಲ ಎಂಬ ಕಾಂಗ್ರೆಸ್ ಸಮರ್ಥನೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಇಷ್ಟು ದಿನ ಏನ್ ಮಾಡ್ತಿದ್ರಿ, ಸ್ಪೀಕರ್ ಅನುಮತಿ ಪಡೆದೆ ಅಥವಾ ಅಂದಿನ ಅಡ್ವಕೇಟ್ ಜನರಲ್ ಅಡ್ವರ್ಸ್ ರಿಪೋರ್ಟ್ ಇದ್ದಾಗಲೂ ಕೋರ್ಟ್ ಗೆ ಬಂದಿದೆ. ಡಿಕೆ ಶಿವಕುಮಾರ್ ಅವರ ವಿರುದ್ಧ ಅನೇಕ ಪ್ರಕರಣಗಳಿವೆ.
ಇದನ್ನು ನ್ಯಾಯಾಲಯದಲ್ಲೇ ವಜಾ ಮಾಡಿಸಬಹುದಿತ್ತು. ರಾಜ್ಯ ಸರ್ಕಾರಕ್ಕೆ ನೀವೇ ಯಾಕೆ ಕಪ್ಪು ಚುಕ್ಕೆಯಿಟ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು..

    ಜಾತಿ ಗಣತಿ ವಿಚಾರ ಮಾತನಾಡಿ, ಜಾತಿ ಗಣತಿ ವರದಿ ಅವಶ್ಯಕತೆಯಿದೆ.ಜನಗಣತಿ 2011ರಲ್ಲಿ ನಡೆದಿದೆ, ಈವರೆಗೆ ಆಗಿಲ್ಲ. ಯಾವುದೇ ಪಂಚವಾರ್ಷಿಕ ಯೋಜನೆಗಳ ಜಾರಿಗೆ ಜನಸಮುದಾಯಗಳ ಸಾಮಾಜಿಕ, ಅರ್ಥಿಕ ಮಾಹಿತಿ ಅತ್ಯವಶ್ಯಕ ಎಂದು ಸಚಿವ ಎ ನಾರಾಯಣ ಸ್ವಾಮಿ ಜಾತಿ ಗಣತಿ ವರದಿ ಪರ ಬ್ಯಾಟ್ ಬೀಸಿದರು.

    ಪ್ರತಿ ಐದು ವರ್ಷಕ್ಕೊಮ್ಮೆ ಜಾತಿಗಣತಿ ವರದಿ ಆಗಬೇಕು ಎಂದ ಸಚಿವರು, ವರದಿ ನಾಪತ್ತೆ ವಿಚಾರ, ಎಲ್ಲಿ ನಾಪತ್ತೆ ಆಯ್ತು ತನಿಖೆ ಆಗಬೇಕಿತ್ತು. ಆದರೆ, ತನಿಖೆ ಮಾಡದೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

     ಒಳ ಮೀಸಲಾತಿ ಕುರಿತು ಎ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿ, ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಬದ್ದ. ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ಈ ಬಗ್ಗೆ ಒಲವು ತೋರಿಸಿದ್ದಾರೆ. ಸುಪ್ರಿಂ ಕೋರ್ಟ್ ಸಹ ಫೆಬ್ರವರಿಯಲ್ಲಿ ಈ ಬಗ್ಗೆ ತೀರ್ಪು ನೀಡಲಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap