17%ಗೆ ಒಪ್ಪದಿದ್ದರೆ ಪ್ಲಾನ್‌ “ಬಿ” ಜಾರಿಗೆ ಮುಂದಾದ ಸರ್ಕಾರ…!

ಬೆಂಗಳೂರು

     7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು ಅದಕ್ಕೆ ಸರ್ಕಾರವು ಸಮೇತ 17 % ನೀಡುವುದಾಗಿ ಹೇಳಿತ್ತು ಆದರೆ ಅದಕ್ಕೆ ಒಪ್ಪದ ಸರ್ಕಾರಿ ನೌಕರರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗುತ್ತದೆ ಎಂದು ತಿಳಿಸಿದೆ .

    ಸರ್ಕಾರ  ಮುಷ್ಕರಕ್ಕೆ ಕರೆ ನಿಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಅದು ವಿಫಲವಾಗಿದೆ ಮತ್ತು ಲಿಖಿತ ರೂಪದಲ್ಲಿ ಆದೇಶ ನೀಡುವವರೆಗೂ ನಾವು ಹಿಂದೆ ಸರಿಯುವ ಮಾತೆ ಇಲ್ಲ ಎಂದು ಸಿ ಎಸ್‌ ಷಡ್ಕಶರಿ ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ ಬಸವರಾಜ ಬೊಮ್ಮಾಯಿ ಅವರ ಆರ್. ಟಿ. ನಗರ ನಿವಾಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಭೇಟಿ ನೀಡಿದರು. ನೌಕರರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ನಿಯೋಗದ ಜೊತೆ ಸುದೀರ್ಘ ಮಾತುಕತೆಯನ್ನು ನಡೆಸಿದರು.ಇನ್ನೂ ಎರಡು ಗಂಟೆಯಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap