ಬೆಂಗಳೂರು:
ನವೆಂಬರ್ 14ರ ಮಂಗಳವಾರ ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಇದೇ ವೇಳೆ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು.
ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು ಎಂದು ಮುಜರಾಯಿ ಇಲಾಖೆ ದೇವಾಲಯಗಳ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ