ಚಾಮರಾಜನಗರ:
ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.
ಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.
ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪದವಿ ಕಾಲೇಜುಗಳಲ್ಲಿ ಅಂತಹ ನಿಯಮವಿಲ್ಲ. ವಿದ್ಯಾರ್ಥಿಗಳು ಇಷ್ಟದ ಉಡುಪು ಧರಿಸಿ ಬರಬಹುದು ಎಂದು ಹೇಳಿದ್ದಾರೆ.
ಶಾಲೆ ಮತ್ತು ಪಿಯುಸಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ. ಸಮವಸ್ತ್ರ ಧರಿಸಬೇಕು. ಕಾನೂನನ್ನು ಎಲ್ಲರೂ ಗೌರವಿಸಬೇಕು. ಕಾನೂನು ಉಲ್ಲಂಘಿಸುವವರ ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ