‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ಅಂಗೀಕಾರ….!

ಬೆಂಗಳೂರು:

   ಪ್ರತಿಪಕ್ಷ ಬಿಜೆಪಿ ಪ್ರತಿಭಟನೆಯ ನಡುವೆ ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸುವ ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸುವ ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ’ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

   ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ ಮೇಯರ್, ಉಪ ಮೇಯರ್‌ಗೆ 30 ತಿಂಗಳ ಅವಧಿಯನ್ನು ಈ ಮಸೂದೆ ಒದಗಿಸುತ್ತದೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಈ ಮಸೂದೆ ಮಂಡಿಸಿದರು.

   ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಅಧಿಕಾರ ಮತ್ತು ಆಡಳಿತದ ವಿಕೇಂದ್ರೀಕರಣ ಬೇಕು. ಕೆಲವು ವಿರೋಧ ಪಕ್ಷದ ಸದಸ್ಯರು ಹೇಳುತ್ತಿರುವಂತೆ ನಾವು ಬೆಂಗಳೂರನ್ನು ನಾಶ ಮಾಡುತ್ತಿಲ್ಲ. ಬದಲಿಗೆ ನಾವು ಅದನ್ನು ಬಲಪಡಿಸುತ್ತಿದ್ದೇವೆ. ಬೆಂಗಳೂರನ್ನು ಬಲಿಷ್ಠಗೊಳಿಸುತ್ತೇವೆ” ಎಂದು ಬೆಂಗಳೂರಿಗೆ ಹೊಸ ದಿಕ್ಕನ್ನು ನೀಡಲು ಈ ಮಸೂದೆಯನ್ನು ತರಲಾಗಿದೆ ಎಂದು ಹೇಳಿದರು.