ಬೆಂಗಳೂರು:
ಈ ನಿಯಮಗಳ ಪಾಲನೆ ಕಡ್ಡಾಯ
ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ಭೀತಿಯ ನಡುವೆಯೂ ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬದ ಆಚರಣೆಗೆ ಅವಕಾಶ ನೀಡಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ನಡುವೆಯೂ ವೈಕುಂಠ ಏಕಾದಶಿ, ಸಂಕ್ರಾಂತಿ ಹಬ್ಬಗಳನ್ನು ಸರಳವಾಗಿ ಆಚರಿಸೋದಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಕೊರೋನಾ ಸಂದರ್ಭದಲ್ಲಿಯೂ ಆಚರಿಸಲಾಗುತ್ತಿರುವಂ ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತ್ರ, ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜೆಗೆ ಅವಕಾಶ ನೀಡಲಾಗಿದೆ.
ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಲಸಿಕೆ ಪಡೆದಂತ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಆದ್ರೇ ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಬೆಂಗಳೂರು ವ್ಯಾಪ್ತಿಯಲ್ಲಿ ಬಿಬಿಎಂಪಿಯ ಮುಖ್ಯ ಆಯುಕ್ತರು, ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸ್ಥಳೀಯ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವಂತೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
