ಗುವಾಹಟಿ:
ಶಾಪಿಂಗ್ ಮಾಲ್ ನ ಹೊರ ಭಾಗದಲ್ಲಿ ಗ್ರೆನೇಡ್ ಸ್ಫೋಟವಾಗಿ, ಇಬ್ಬರು ಮೃತಪಟ್ಟಿದ್ದಾರೆ.
ನಗರದ ಝೂ ರಸ್ತೆಯಲ್ಲಿರುವ ಸೆಂಟ್ರಲ್ ಮಾಲ್ ಬಳಿ ಬುಧವಾರ ರಾತ್ರಿ 8 ಗಂಟೆಯ ವೇಳೆಗೆ ಮೋಟಾರ್ ಬೈಕ್‌ನಲ್ಲಿ ಬಂದ ಉಲ್ಫಾ ಉಗ್ರನೊಬ್ಬ ಗ್ರೆನೇಡ್ ಎಸೆದು ಪರಾರಿಯಾಗಿದ್ದಾನೆ. ದಾಳಿಯಲ್ಲಿ ಮಗು ಸೇರಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಇಬ್ಬರು ಶಸಸ್ತ್ರ ಸೀಮಾ ಬಲದ ಜವಾನರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸರ್ಬನಂದ ಸೋನೋವಾಲ ಸಭೆ ನಡೆಸಿ, ಸೂಚಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ.
ದಾಳಿಯ ಹೊಣೆಯನ್ನು ಪರೇಶ್ ಬರುಹಾ ನಾಯಕತ್ವದ ಉಲ್ಫಾ ಸ್ವಾಧೀನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಘಟನೆ ಬಳಿಕ ಗುವಾಹಟಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
