ಜು.16ಕ್ಕೆ ಗೃಹಲಕ್ಷ್ಮಿ ಜಾರಿ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು 

      ಕರ್ನಾಟಕ ಸರ್ಕಾರದ ಗ್ಯಾರೆಂಟಿಗಳಲ್ಲಿ ಪ್ರಮುಖವಾದ ಒಂದಾದ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ನೀಡುವ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲು ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ.

       ರಾಜ್ಯದಲ್ಲಿ ಸಾವಿರಾರು ಮಹಿಳೆಯರು ಎದುರು ನೋಡುತ್ತಿರುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾಧ್ರಾ ಅವರಿಂದ ಚಾಲನೆ ಕೊಡಿಸಲು ಸರ್ಕಾರ ಚಿಂತನೆ ನಡೆದಿದೆ.

     ಇದೇ ಜುಲೈ 16 ರಿಂದ 18ರವರೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. 

     ಏನೆ ಆದ್ರು ಭಾರತ ಬಿಟ್ಟು ಹೋಗಲ್ಲ ಎಂದ ಪಾಕ್ ಮಹಿಳೆ! ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14 ರಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.

    ಮಹತ್ವದ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14ರಂದು ಆರಂಭವಾಗಲಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಆಗಸ್ಟ್‌ನಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ 2 ಸಾವಿರ ರೂಪಾಯಿ ಜಮಾ ಮಾಡಲಾಗುವುದು. ಕಾಂಗ್ರೆಸ್ ಕೊಟ್ಟಿರುವ ಭರವಸೆಯನ್ನು ಈಡೇರಿಸಲಿದೆ. ಸ್ಥಿರ ಸರ್ಕಾರ ಮತ್ತು ಸಮೃದ್ಧ ಕರ್ನಾಟಕ ನಮ್ಮ ಗುರಿಯಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದರು.

    ಆದರೆ ಅದನ್ನು ಜುಲೈ 16 ರಿಂದ 18ರವರೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಜಾರಿಗೆ ತರುವ ಸಾಧ್ಯತೆ ಇದೆ. ಅಂದುಕೊಂಡಂತೆ ಆದರೆ ಜುಲೈ 18ರಂದು ಅರ್ಜಿ ಸ್ವೀಕರಿಸಲು ಪ್ರಕ್ರಿಯೆ ಆರಂಭಿಸಿದರೆ, ರಾಜ್ಯಾದ್ಯಂತ ಇರುವ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು. ಅವುಗಳ ಪರಿಶೀಲನೆ ಮಾಡಿ ಒಂದು ತಿಂಗಳ ಒಳಗೆ ಎಲ್ಲರ ಖಾತೆಗೆ ಹಣ ಹಾಕಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆಯಾ ಎನ್ನುವ ಪ್ರಶ್ನೆ ಮೂಡುತ್ತದೆ.

 ಅರ್ಜಿ ಸಲ್ಲಿಸುವುದು ಹೇಗೆ?

      ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್‌ ಪ್ರಯಾಣದ ಖುಷಿಯಲ್ಲಿರುವಾಗಲೇ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಪೂರ್ಣಗೊಂಡಿದೆ. 50 ವರ್ಷಗಳ ನಂತರ ನವಪಂಚ ರಾಜಯೋಗ: ಈ 4 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ.

     200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಪೂರೈಸುವ ‘ಗೃಹ ಜ್ಯೋತಿ’ ಯೋಜನೆಯಡಿ ಈಗಾಗಲೇ ಆರಂಭವಾಗಿರುವ ಅರ್ಜಿ ಸ್ವೀಕಾರ ಪ್ರಕ್ರಿಯೆ ಒತ್ತಡ ಸೃಷ್ಟಿಸಿದ್ದು, ಸೇವಾ ಸಿಂಧು ಸರ್ವರ್‌ ಓವರ್‌ಲೋಡ್‌ ಆಗಿ ಸಮಸ್ಯೆಯಾಗಿದೆ. ಇಂತಹ ಸಮಸ್ಯೆ ತಪ್ಪಿಸಲು ‘ಗೃಹ ಲಕ್ಷ್ಮಿ’ಗೆ ಪ್ರತ್ಯೇಕ ಆ್ಯಪ್‌ ಸಿದ್ಧಪಡಿಸಲಾಗಿದೆ. ಜತೆಗೆ, ಬಾಪೂಜಿ ಸೇವಾ ಕೇಂದ್ರ, ನಾಡಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

     ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap