ಮೈಸೂರು:
ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಅವರ ಜಾಮೀನು ಅವಧಿಯ ಆರು ವಾರದಲ್ಲಿ ಮೂರು ವಾರ ಕಳೆದರೂ ಇನ್ನೂ ಶಸ್ತ್ರಚಿಕಿತ್ಸೆ ನಡೆದಿಲ್ಲ. ಈ ಬಗ್ಗೆ ಇದೀಗ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಶಸ್ತ್ರಚಿಕಿತ್ಸೆ ಬಳಿಕ ನಟ ದರ್ಶನ್ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ತಿಳಿಸಿದ್ದಾರೆ.
ಈ ಕುರಿತಾಗಿ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೃಹ ಸಚಿವರು, ಸದ್ಯ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಜಾಮೀನು ಬೇಲ್ ಕೇಳಬಹುದು. ಹಾಗಾಗಿ ಅವರಿಗೆ ಬೇಲ್ ನೀಡಬಾರದು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕುತ್ತೇವೆ. ಕೊಲೆ ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣ ಬಳಿಕ ಸಂಪೂರ್ಣ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು.
ಚಿಕಿತ್ಸೆಯ ಬಳಿಕ ದರ್ಶನ್ ವಾಪಸ್ ಜೈಲಿಗೆ ಹೋಗಬೇಕು. ದರ್ಶನ್‌ಗೆ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ. ರಕ್ತದೊತ್ತಡದ ಕಾರಣ ಆಪರೇಷನ್ ವಿಳಂಬವಾಗಿದೆ. ಚಿಕಿತ್ಸೆಗೆ ದರ್ಶನ್ ಸಿದ್ಧರಿದ್ದಾರೆ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಯಾವಾಗ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ ಎಂಬುವುದು ತಿಳಿದಿಲ್ಲ. ಶಸ್ತ್ರಚಿಕಿತ್ಸೆಗೆ ತಯಾರಿ ನಡೆಸುತ್ತಾ ಇದ್ದಾರೆ ಎಂದು ವೈದ್ಯಕೀಯ ವರದಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
