ಗೃಹ ಜ್ಯೋತಿಗೆ ಚಾಲನೆ ನೀಡಿದ ಸಿಎಂ….!

ಕಲಬುರಗಿ:

    ನೂತನ ವಿದ್ಯಾಲಯ ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

    ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್‌ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

     ಈ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್,‌ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿ ಹಲವರು ಸಾಥ್ ನೀಡಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಚಿವ ಕೆ.ಜೆ.ಜಾರ್ಜ್ ಅವರು, ಗೃಹಜೋತಿ ಯೋಜನೆ ನೋಂದಣಿಗೆ ಅಂತಿಮ ದಿನಾಂಕ ಇಲ್ಲ ಎಂದು ಹೇಳಿದರು.ರಾಹುಲ್ ಗಾಂಧಿ ಕರ್ನಾಟಕದಲ್ಲೂ ಜೋಡೋ ಯಾತ್ರೆ ಮಾಡಿದ್ದರು. ಭಾರತ ಜೋಡೋ ಯಾತ್ರೆ ವೇಳೆ ಸಾಮಾನ್ಯ ಜನರ ಜೊತೆ ಚರ್ಚೆ ಮಾಡಿ ಅವರ ಸಮಸ್ಯೆ ಅರಿತುಕೊಂಡಿದ್ದರು. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮಧ್ಯಮ ವರ್ಗದವರು ಸಂಕಷ್ಟದಲ್ಲಿದ್ದಾರೆ. ಅವರ ಕೈ ಬಲಪಡಿಸಬೇಕು ಎಂದು ಹೇಳಿದ್ದರು. ಅವರ ಸೂಚನೆ ಮೇರೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು.

    ಒಂದು ಕೋಟಿ 42 ಲಕ್ಷ ಜನರು ಗೃಹಜೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜೋತಿ ನೋಂದಣಿಗೆ ಕಡೆಯ ದಿನಾಂಕವೆಂದೇನೂ ಇಲ್ಲ. ಉಚಿತವಾಗಿ ನೀಡುವುದು ಉಡುಗೊರೆಯಲ್ಲ. ಬದಲಾಗಿ ಜನರ ಆರ್ಥಿಕ ಸ್ಥಿತಿ ಸುಧಾರಿಸವ ಪ್ರಯತ್ನವಾಗಿದೆ. ಸಾಮಾನ್ಯ ಜನರಿಗೆ ಹಣ ಉಳಿದರೆ, ಅವರು ಬೇರೆ ರೂಪದಲ್ಲಿ ಹಣ ಖರ್ಚು ಮಾಡುತ್ತಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ತೆರಿಗೆ ಬರಲಿದೆ. ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗೆಯೇ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂಡಾ ಗೆಲ್ಲಿಸಬೇಕು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap